ಚಿಕ್ಕಮಗಳೂರು : ಗ್ರಾಮ ಲೆಕ್ಕಾಧಿಕಾರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಕೆ.ಬಿದರೆ ಗ್ರಾಮದಲ್ಲಿ ನಡೆದಿದೆ. ಗ್ರಾಮ ಲೆಕ್ಕಾಧಿಕಾರಿ ದೇವರಾಜಪ್ಪ ಎಂಬುವರು ಬಿ.ಬಸವನಹಳ್ಳಿ ಗ್ರಾಮದ ಗಂಗಮ್ಮ ಎಂಬುವರಿಂದ ವಿಧವಾ ವೇತನ ಮಂಜೂರು ಮಾಡಲು ಎರಡು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಡಿವೈಎಸ್ಪಿ ನಾಗೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.ಪಂಚನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










