ಇಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ…

235
firstsuddi

ಬೆಂಗಳೂರು: ಇಂದು ರಾಜ್ಯ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಮಹತ್ವದ ಸಭೆ ನಡೆಯಲಿದ್ದು, ಇಂದು ಸಂಜೆ  ಸುಮಾರು 5 ಗಂಟೆಗೆ ಮಾಜಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರ  ಅಧ್ಯಕ್ಷತೆಯಲ್ಲಿ ಕುಮಾರಕೃಪಾ ಅತಿಥಿಗೃಹದಲ್ಲಿ ಜೆಡಿಎಸ್‌ -ಕಾಂಗ್ರೆಸ್‌ ಸಮನ್ವಯ ಸಮಿತಿಸಭೆ ನಡೆಯಲಿದೆ. ಸಮನ್ವಯ ಸಮಿತಿ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕ ಸೇರಿದಂತೆ ಇತರ ವಿಚಾರಗಳ ಬಗ್ಗೆ ಪ್ರಸ್ತಾಪವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.