ಚಿಕ್ಕಮಗಳೂರು: ಬಿಜೆಪಿ ಮುಖಂಡರ ಬಂಧನ‌ ಖಂಡಿಸಿ ಪೊಲೀಸ್ ಠಾಣೆ ಎದುರೇ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ಪ್ರತಿಭಟನೆ…

1121

ಚಿಕ್ಕಮಗಳೂರು :ಬಿಜೆಪಿ ಮುಖಂಡರ ಬಂಧನ‌ ಖಂಡಿಸಿ ಶಾಸಕ ಸಿ.ಟಿ.ರವಿ ಅವರು ದಿಢೀರ್ ಪ್ರತಿಭಟನೆ ನಡೆಸುತ್ತಿದ್ದು, ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಆಹ್ವಾನ ನೀಡದ ಹಿನ್ನಲೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದರು. ಈ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ತಾಲೂಕು ಪಂಚಾಯತ್ ಅಧ್ಯಕ್ಷರನ್ನು ಬಂಧಿಸಲಾಗಿತ್ತು.ಬಂಧನ ಖಂಡಿಸಿ ಚಿಕ್ಕಮಗಳೂರಿನ ಬಸವನಹಳ್ಳಿ‌ ಪೊಲೀಸ್ ಠಾಣೆ ಎದುರೇ ಪೊಲೀಸರ ನಡೆ ಖಂಡಿಸಿ ಶಾಸಕ ಸಿ.ಟಿ.ರವಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.