ಮೂಡಿಗೆರೆ: ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ 62ನೇ ಪರಿನಿಬ್ಬಾಣದ ಅಂಗವಾಗಿ ತಾಲೂಕಿನ ಕೊಟ್ಟಿಗೆಹಾರದಲ್ಲಿ ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಈ ಅವಕಾಶವನ್ನು ಸುತ್ತಮುತ್ತಲಿನ ಗ್ರಾಮಸ್ಥರು ಸದುಪಯೋಗ ಪಡಿಸಿಕೊಂಡಿದ್ದಾರೆ.ಕೃಷ್ಣ ಆಸ್ಪತ್ರೆ ಕಕ್ಕಿಂಜೆ, ಪೀಸ್ ಆಂಡ್ ಅವರ್ನೆಸ್ ಟ್ರಸ್ಟ್, ಆಟೊ ಚಾಲಕರು ಮತ್ತು ಮಾಲೀಕರ ಸಂಘ, ಮತ್ತು ಕೊಟ್ಟಿಗೆಹಾರ ಬದ್ರಿಯ ಜುಮಾ ಮಸೀದಿ ಇದಕ್ಕೆ ಸಹಕಾರ ನೀಡಿದ್ದಾರೆ.










