ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಚೆನ್ನೈಗೆ ಕರೆದೊಯ್ಯಲಾಗುತ್ತಿದೆ. ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನುನೀಡಲಾಗುತ್ತದೆ.
ಸಿದ್ದಗಂಗಾ ಮಠದ ಶ್ರೀಗಳನ್ನು ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪ ಅವರು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.ಬಳಿಕ ಟ್ವಿಟ್ಟರ್ ನಲ್ಲಿ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಡಾ. ಶಿವಕುಮಾರ್ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿ, ಅವರ ಆಶೀರ್ವಾದ ಪಡೆಯಲಾಯಿತು. ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಲವಲವಿಕೆಯಿಂದ ಇದ್ದಾರೆ. ಭಕ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.











