ಅಹ್ಮದ್‍ನಗರ: ಮಹಾತ್ಮ ಫುಲೆ ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವೇದಿಕೆಯಲ್ಲಿಯೇ ಕುಸಿದು ಬಿದ್ದಿದ್ದು, ಕೂಡಲೇ ಭದ್ರತಾ ಸಿಬ್ಬಂದಿ ಸೇರಿದಂತೆ ಹಲವು ಗಣ್ಯರು ನಿತಿನ್ ಗಡ್ಕರಿ ಅವರನ್ನು ಹಿಡಿದುಕೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.










