ಬೆಳಗಾವಿಯಲ್ಲಿ ಮುಂದುವರೆದ ರೈತರ ಪ್ರತಿಭಟನೆ… 

614
firstsuddi

ಬೆಳಗಾವಿ:ಕಬ್ಬಿಗೆ ಸೂಕ್ತ ಬೆಲೆ ನಿಗದಿಗಾಗಿ ಹಾಗೂ ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದು, ರೈತರ ಹೋರಾಟಕ್ಕೆ ಯಾವುದೇ ರೀತಿಯಲ್ಲೂ ಸರ್ಕಾರ ಸ್ಪಂದಿಸದ ಹಿನ್ನಲೆ ರೈತರು  ಡಿ ಸಿ ಕಚೇರಿಯಿಂದ ಸುವರ್ಣ ಸೌಧಕ್ಕೆ ಪಾದಯಾತ್ರೆ ಹೊರಟಿದ್ದಾರೆ.  ಆದರೆ ಪೊಲೀಸರು ಪಾದಯಾತ್ರೆಯನ್ನು ನಡೆಸುತ್ತಿದ್ದ ರೈತರನ್ನು  ತಡೆದಿದ್ದು,   ಬಾಗಲಕೋಟೆ ಜಿಲ್ಲೆಯ ರೈತರು ಸೇರಿದಂತೆ  ವಿವಿದೆಡೆಯಿಂದ ಪಾದಯಾತ್ರೆಗೆ ರೈತರು ಆಗಮಿಸುತ್ತಿದ್ದು, ಸರ್ಕಾರದ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.