ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಮಿತ್ ಷಾ…

222
firstsuddi

ನವದೆಹಲಿ: ರಫೇಲ್​ ಡೀಲ್​  ಬಗ್ಗೆ ತನಿಖೆ ನಡೆಸಬೇಕೆಂಬ ಅರ್ಜಿಗಳನ್ನು ಸುಪ್ರೀಂಕೋರ್ಟ್​ ಇಂದು ತಿರಸ್ಕರಿಸಿದ ಹಿನ್ನಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ  ಅಮಿತ್ ಷಾ ಅವರು  ಗೆಲುವು ಯಾವಾಗಲು ಸತ್ಯದ ಕಡೆ ಇರುತ್ತದೆ. ರಫೇಲ್ ಯುದ್ಧ ವಿಮಾನ ಖರೀದಿ  ಬಗ್ಗೆ ರಾಹುಲ್ ಗಾಂಧಿ ಅವರು ಸುಳ್ಳನ್ನು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ.  ನಾವು ಸುಪ್ರೀಂ ಕೋರ್ಟ್ ಆದೇಶವನ್ನು ಸ್ವೀಕರಿಸುತ್ತೇವೆ.  ರಾಹುಲ್ ಗಾಂಧಿ ಅವರು  ದೇಶದ ಜನರಿಗೆ ಹಾಗೂ ಸೇನೆಯ ಬಳಿ ಕ್ಷಮೆ ಕೇಳಬೇಕು ಎಂದು  ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.