ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರ ಯೋಗಕ್ಷೇಮ ವಿಚಾರಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಅಸ್ವಸ್ಥರಿಗೆ ನೀಡುತ್ತಿರುವ ಚಿಕಿತ್ಸಾ ಸೌಲಭ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದೇನೆ ಹಾಗೂ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದೇನೆ.ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದಿದ್ದಾರೆ.










