ದೇವಸ್ಥಾನದಲ್ಲಿ ಪ್ರಸಾದವನ್ನು ಆರೋಗ್ಯ ಅಧಿಕಾರಿಗಳು ಪರೀಕ್ಷಿಸದೆ ವಿತರಿಸುವಂತಿಲ್ಲ…

202
firstsuddi

ಬೆಂಗಳೂರು:ಸುಳ್ವಾಡಿ ಮಾರಮ್ಮ ದೇವಸ್ಥಾನ ವಿಷ ಪ್ರಸಾದ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಈ ಹಿನ್ನಲೆಯಲ್ಲಿ  ಇನ್ನು ಮುಂದೆ ದೇವಸ್ಥಾನಗಳಲ್ಲಿ ಪ್ರಸಾದ ಹಾಗೂ ನೈವೇದ್ಯವನ್ನು ಸ್ಥಳೀಯ ಆರೋಗ್ಯ ಅಧಿಕಾರಿಗಳು ಪರೀಕ್ಷಿಸದೆ ವಿತರಿಸುವಂತಿಲ್ಲ ಹಾಗೂ ದೇವಸ್ಥಾನಗಳಲ್ಲಿ ನೈವೇದ್ಯ ದಾಸೋಹ ತಯಾರಿಕಾ ಕೊಠಡಿಗೆ ಸಿಸಿಟಿವಿಯನ್ನು ಅಳವಡಿಸಬೇಕೆಂದು ಧಾರ್ಮಿಕ ದತ್ತಿ ಇಲಾಖೆಯು ಆದೇಶಿಸಿದೆ.