ಬಿಎಂಟಿಸಿ ಬಸ್ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳ ದುರ್ಮರಣ…

214
firstsuddi

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ  ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ಕಸ್ತುರ್ ಬಾ ಕಾಲೇಜು ಬಳಿ ನಡೆದಿದೆ. ಯದುಕುಮಾರ್ ಮತ್ತು ಚಂದ್ರಕಾಂತ್ ಮೃತ ದುರ್ದೈವಿಗಳು. ಇಬ್ಬರೂ ಪಿಯುಸಿ ವಿದ್ಯಾರ್ಥಿಗಳು ಎನ್ನಲಾಗಿದ್ದು,   ಕಾಲೇಜಿಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ಬಸ್ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಬಿಬಿಎಂಪಿ ಘೋಷಿಸಿದೆ ಎಂದು ತಿಳಿದು ಬಂದಿದೆ.