ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಕಿಚ್ಚುಗತ್ತಿ ಮಾರಮ್ಮನ ದೇವಾಲಯದ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಸಾಲೂರು ಕಿರಿಯಶ್ರೀ, ದೇವಾಲಯದ ಟ್ರಸ್ಟ್ ವ್ಯವಸ್ಥಾಪಕ ಮಾದೇಶ್ ಮತ್ತು ಮಾದೇಶ್ ಪತ್ನಿ ಅಂಬಿಕಾ, ದೊಡ್ಡಯ್ಯ ಎಂಬುವವರನ್ನು ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.










