ವಿಷ ಪ್ರಸಾದ ದುರಂತ : ವಿಷ ಹಾಕಿದ್ದು ಅರ್ಚಕನ..?

290
firstsuddi

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ  ಕಿಚ್ಚುಗತ್ತಿ ಮಾರಮ್ಮನ ದೇವಾಲಯದ ವಿಷ  ಪ್ರಸಾದ ಪ್ರಕರಣಕ್ಕೆ  ಸಂಬಂಧಿಸಿದಂತೆ  ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಸಾಲೂರು ಕಿರಿಯಶ್ರೀ , ದೇವಾಲಯದ ವ್ಯವಸ್ಥಾಪಕ ಮಾದೇಶ್ ಮತ್ತು ಮಾದೇಶ್ ಪತ್ನಿ ಅಂಬಿಕಾ, ದೊಡ್ಡಯ್ಯ ಎಂಬುವರು ಪ್ರಮುಖ ಆರೋಪಿಗಳು ಎನ್ನಲಾಗುತ್ತಿದ್ದು, ನಾಗರಕೋಯಿಲು ದೇವಾಲಯದ ಅರ್ಚಕ ದೊಡ್ಡಯ್ಯ ಪ್ರಸಾದಕ್ಕೆ ವಿಷ ಬೆರೆಸಿದ್ದು ನಾನೇ ಎಂದು ತಪೋಪ್ಪಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದ್ದು, ಆರೋಪಿಗಳನ್ನು ಪೊಲೀಸರು ಕೊಳ್ಳೇಗಾಲದ ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  ಅಡುಗೆ ಭಟ್ಟ ಪುಟ್ಟಸ್ವಾಮಿಯನ್ನು  ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.