ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿ ಅವರು ಚೆನ್ನೈನ ರೇಲಾ ಇನ್‌ಸ್ಟಿಟ್ಯೂಟ್ ಮೆಡಿಕಲ್ ಸೆಂಟರ್ ಆಸ್ಪತ್ರೆಯಿಂದ ನಿನ್ನೆ ಡಿಸ್ಚಾರ್ಜ್ ಆಗಿ ಮಠಕ್ಕೆ ತೆರಳಿರುವ ಶ್ರೀಗಳು ಇಂದು ಬೆಳಗ್ಗೆ ಸ್ನಾನ ಮುಗಿಸಿ ಇಷ್ಟಲಿಂಗ ಪೂಜೆ ಸಲ್ಲಿಸಿದ್ದು, ಬಳಿಕ ಇಡ್ಲಿ ಮತ್ತು ಹಣ್ಣು ಹಂಪಲುಗಳನ್ನು ಸ್ವೀಕರಿಸಿದ್ದಾರೆ. ಶ್ರೀಗಳಿಗೆ ಇನ್ನೂ ಕೆಲ ದಿನಗಳ ಕಾಲ ವಿಶ್ರಾಂತಿಯ ಅಗತ್ಯವಿದ್ದು, ಭಕ್ತರಿಗೆ ದರ್ಶನ ಅವಕಾಶವಿರುವುದಿಲ್ಲ. ವೈದ್ಯರು ಶ್ರೀಗಳ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.










