ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ನೂತನ ಸಚಿವರ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಪುಟಕ್ಕೆ ಸೇರಲಿರುವ ನೂತನ ಸಚಿವರ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದೇನೆ. ಇಂದು ಸಂಜೆ 5-20ಕ್ಕೆ ಸಚಿವರು ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಕಲ್ಪಿಸುವಂತೆ ರಾಜ್ಯ ಪಾಲರನ್ನು ಭೇಟಿ ಮಾಡಿ ಅನುಮತಿ ಪಡೆದಿದ್ದೇನೆ. ಇಂದು 8 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.










