ಬೆಂಗಳೂರು: ಇಂದು ಸಂಜೆ 5-20ಕ್ಕೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಹಿನ್ನಲೆಯಲ್ಲಿ ರಾಜಭವನದ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ 4ಡಿಸಿಪಿ, 10 ಪೊಲೀಸ್ ಇನ್ ಸ್ಪೆಕ್ಟರ್, 20 ಪಿಎಸ್ಐ, ಹಾಗೂ 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ . ಪಾಸ್ ಇದ್ದವರಿಗೆ ಮಾತ್ರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಅವರು ಪರಿಶೀಲನೆ ನಡೆಸಿದ್ದಾರೆ.










