ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಕೆಜಿಎಫ್ ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮ್ಮ ಟ್ವಿಟ್ಟರ್ ನಲ್ಲಿ ಕನ್ನಡದ ಸಿನೆಮಾವೊಂದು ಕರ್ನಾಟಕವನ್ನು ದಾಟಿ ದೇಶದುದ್ದಗಲಕ್ಕೂ ಹಾಗೂ ವಿದೇಶದಲ್ಲೂ ಜನಮನವನ್ನು ಗೆಲ್ಲುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ವಿಚಾರ. ನಮ್ಮ ಕನ್ನಡ ಚಿತ್ರರಂಗ ಬೇರಾರಿಗೂ ಕಮ್ಮಿಯಿಲ್ಲ ಎಂದು ಅವುಗಳ ಯಶಸ್ಸಿನ ಮೂಲಕವೇ ಸಾರುವ ಸಮಯ ಬಂದಿದೆ. ಕೆಜಿಎಫ್ ತಂಡಕ್ಕೆ ನನ್ನ ಹೃತ್ಪೂರ್ವಕ ಶುಭಾಶಯಗಳು ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.











