ಹತ್ಯೆ ಮಾಡಿದ ಆರೋಪಿಯನ್ನು ಶೂಟೌಟ್ ಮಾಡಿ ಹೇಳಿಕೆಗೆ ಸಿಎಂ ಸ್ಪಷ್ಟನೆ…

406
firstsuddi

ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ  ಹಾಡುಹಗಲೇ ನಡೆದಿರುವ ಜೆಡಿಎಸ್ ಮುಖಂಡನ ಹತ್ಯೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ  ಅವರು ಹತ್ಯೆ ಮಾಡಿದ ಆರೋಪಿಯನ್ನು ಶೂಟೌಟ್ ಮಾಡಿ ಎಂದಿದ್ದರು. ಇದೀಗ ಮುಖ್ಯಮಂತ್ರಿ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.  ಪ್ರಕರಣ ಕುರಿತು ಮಾಹಿತಿ ಪಡೆಯುವ ಸಂದರ್ಭದಲ್ಲಿ ಬಳಸಿದ ಪದ ಭಾವನಾತ್ಮಕ ಪ್ರತಿಕ್ರಿಯೆಯೇ ಹೊರತು, ಆದೇಶವಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸಿಎಂ  ಕುಮಾರಸ್ವಾಮಿಯವರು ಸ್ಪಷ್ಟಪಡಿಸಿದ್ದಾರೆ.