ಬೋಗಿಬಿಲ್ ಸೇತುವೆ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ…

241
firstsuddi

ನವದೆಹಲಿ: ದೇಶದ ಅತಿ ಉದ್ದದ ರಸ್ತೆ ಮತ್ತು ರೈಲ್ವೆ ಸೇತುವೆ ಬೋಗಿಬೀಲ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಲೋಕಾರ್ಪಣೆ ಮಾಡಿದ್ದಾರೆ. 1997ರ ಜನವರಿ 22ರಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸೇತುವೆ ನಿರ್ಮಾಣ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. 2002ರ ಏಪ್ರಿಲ್ 21ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದರು. ಮಾಜಿ ಪ್ರಧಾನಿ  ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೇತುವೆಯನ್ನು ಲೋಕಾರ್ಪಣೆ ಮಾಡಿದ್ದಾರೆ.