ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆ ರಮೇಶ್ ಜಾರಕಿಹೊಳಿ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ರಮೇಶ್ ಜಾರಕಿಹೊಳಿ ಅವರ ಮೊಬೈಲ್ ಕಳೆದ 3 ದಿನಗಳಿಂದ ಸ್ವಿಚ್ ಆಫ್ ಆಗಿದ್ದು, ಸಚಿವ ಸತೀಶ್ ಜಾರಕಿಹೊಳಿ ಅವರು ಸಹೋದರ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಲು ನಿನ್ನೆ ಗೋಕಾಕ್ ಗೆ ತೆರಳಿದ್ದು, ಆದರೆ ರಮೇಶ್ ಜಾರಕಿಹೊಳಿ ಅವರು ಗೋಕಾಕ್ ನಲ್ಲಿ ಇರಲಿಲ್ಲ ಎಂದು ತಿಳಿದುಬಂದಿದ್ದು, ರಮೇಶ್ ಜಾರಕಿಹೊಳಿ ಅವರ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.










