ಬೆಂಗಳೂರು: ರಾಜ್ಯದ ಐಪಿಎಸ್ ಅಧಿಕಾರಿ ವಿ.ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, “ಅತ್ಯುತ್ತಮ ಅಧಿಕಾರಿಯಾಗಿದ್ದ ಅವರು ನೇರ ನಡೆನುಡಿಗಳಿಂದ ಜನಪ್ರಿಯರಾಗಿದ್ದರು. ಅವರ ಅಕಾಲಿಕ ನಿಧನ ತೀವ್ರ ಆಘಾತ ಉಂಟು ಮಾಡಿದೆ.ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬದವರಿಗೆ ಈ ಆಘಾತ ಸಹಿಸುವ ಶಕ್ತಿ ನೀಡಲಿ” ಎಂದು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ರಾಜ್ಯದ ಐಪಿಎಸ್ ಅಧಿಕಾರಿ ವಿ.ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
"ಅತ್ಯುತ್ತಮ ಅಧಿಕಾರಿಯಾಗಿದ್ದ ಅವರು ನೇರ ನಡೆನುಡಿಗಳಿಂದ ಜನಪ್ರಿಯರಾಗಿದ್ದರು. ಅವರ ಅಕಾಲಿಕ ನಿಧನ ತೀವ್ರ ಆಘಾತ ಉಂಟು ಮಾಡಿದೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬದವರಿಗೆ ಈ ಆಘಾತ ಸಹಿಸುವ ಶಕ್ತಿ ನೀಡಲಿ" pic.twitter.com/kVxSCx5cW6
— CM of Karnataka (@CMofKarnataka) December 28, 2018
ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, ಯುವ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನಿಂದ ಆಘಾತಕ್ಕಿಡಾಗಿದ್ದೇನೆ. ಹಿರಿಯ ಪತ್ರಕರ್ತ ಮತ್ತು ನನ್ನ ಹಿತೈಷಿಯಾಗಿದ್ದ ವಡ್ಡರ್ಸೆ ರಘುರಾಮ ಶೆಟ್ಟಿಯವರ ಮಗ ಎನ್ನುವ ಕಾರಣದಿಂದಾಗಿ ನನಗೆ ಹೆಚ್ಚು ಪ್ರೀತಿಪಾತ್ರರಾಗಿದ್ದರು. ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.
ಯುವ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನಿಂದ ಆಘಾತಕ್ಕಿಡಾಗಿದ್ದೇನೆ. ಹಿರಿಯ ಪತ್ರಕರ್ತ ಮತ್ತು ನನ್ನ ಹಿತೈಷಿಯಾಗಿದ್ದ ವಡ್ಡರ್ಸೆ ರಘುರಾಮ ಶೆಟ್ಟಿಯವರ ಮಗ ಎನ್ನುವ ಕಾರಣದಿಂದಾಗಿ ನನಗೆ ಹೆಚ್ಚು ಪ್ರೀತಿಪಾತ್ರರಾಗಿದ್ದರು. ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/MpoPxnqx2K
— Siddaramaiah (@siddaramaiah) December 28, 2018
ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಬಿ ಎಸ್ ಯಡ್ಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದು, ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ನಿಧನ ಸುದ್ದಿ ಅತೀವ ನೋವು ತಂದಿದೆ.ಮಧುಕರ್ ಶೆಟ್ಟಿಯವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಬರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ ತಿಳಿಸಿದ್ದಾರೆ
ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ನಿಧನ ಸುದ್ದಿ ಅತೀವ ನೋವು ತಂದಿದೆ.
ಮಧುಕರ್ ಶೆಟ್ಟಿಯವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಬರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/B8M2KRjDxM
— B.S. Yeddyurappa (@BSYBJP) December 28, 2018
ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿರುವ ಮಧುಕರ್ ಶೆಟ್ಟಿಯವರು ತೀವ್ರ ಅನಾರೋಗ್ಯದಿಂದ ನಿಧನರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.
ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿರುವ ಮಧುಕರ್ ಶೆಟ್ಟಿಯವರು ತೀವ್ರ ಅನಾರೋಗ್ಯದಿಂದ ನಿಧನರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ.
— H D Devegowda (@H_D_Devegowda) December 28, 2018
ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದು, ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ, ಕನ್ನಡಿಗರೇ ಆದ ಮಧುಕರ್ ಶೆಟ್ಟಿ ಅವರ ಅಕಾಲಿಕ ಮರಣ ನೋವುಂಟು ಮಾಡಿದೆ. ಭ್ರಷ್ಟರಿಗೆ ಸಿಂಹ ಸ್ವಪ್ನರಂತಿದ್ದ ಇವರು, ವೀರಪ್ಪನ್ ವಿರುದ್ಧದ ಕಾರ್ಯಾಚರಣೆ ಮತ್ತು ಆ್ಯಂಟಿ ನಕ್ಸಲ್ ಸ್ಕ್ವಾಡ್ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದಾರೆ. ಇವರ ಅಗಲಿಕೆ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದೇವರು ಕರುಣಿಸಲಿ ಎಂದು ತಿಳಿಸಿದ್ದಾರೆ.
ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ, ಕನ್ನಡಿಗರೇ ಆದ ಮಧುಕರ್ ಶೆಟ್ಟಿ ಅವರ ಅಕಾಲಿಕ ಮರಣ ನೋವುಂಟು ಮಾಡಿದೆ. ಭ್ರಷ್ಟರಿಗೆ ಸಿಂಹ ಸ್ವಪ್ನರಂತಿದ್ದ ಇವರು, ವೀರಪ್ಪನ್ ವಿರುದ್ಧದ ಕಾರ್ಯಾಚರಣೆ ಮತ್ತು ಆ್ಯಂಟಿ ನಕ್ಸಲ್ ಸ್ಕ್ವಾಡ್ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದಾರೆ. ಇವರ ಅಗಲಿಕೆ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದೇವರು ಕರುಣಿಸಲಿ. pic.twitter.com/tcn9q4Ugo8
— Dr. G Parameshwara (@DrParameshwara) December 28, 2018
ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಡಿ. ವಿ ಸದಾನಂದ ಗೌಡ ಅವರು ಸಂತಾಪ ಸೂಚಿಸಿದ್ದು, ಕುಂದಾಪುರ ಮೂಲದ ಐ ಪಿ ಎಸ ಅಧಿಕಾರಿ ಶ್ರೀ ಮಧುಕರ ಶೆಟ್ಟಿ ಯವರ ಅಕಾಲಿಕ ನಿಧನ ದ ಸುದ್ದಿ ಕೇಳಿ ಆಘಾತವಾಯಿತು . ಅವರ ತಂದೆ ದಿವಂಗತ ವಡ್ಡರ್ಸೆ ರಘುರಾಮ ಶೆಟ್ಟರು ನೇರ ನಿಷ್ಠೆಯ ಪತ್ರಕರ್ತರಾಗಿದ್ದರು . ಅದೇ ಗುಣಗಳು ಅವರ ಪುತ್ರನಲ್ಲಿತ್ತು . ಖಡಕ್ ಅಧಿಕಾರಿಯ ಅಗಲಿಕೆ ಕನ್ನಡ ನಾಡಿಗೆ ದೊಡ್ಡ ನಷ್ಟ . ಓಂ ಶಾಂತಿ ಎಂದು ಟ್ವಿಟ್ ಸಂತಾಪ ಸೂಚಿಸಿದ್ದಾರೆ.
ಕುಂದಾಪುರ ಮೂಲದ ಐ ಪಿ ಎಸ ಅಧಿಕಾರಿ ಶ್ರೀ ಮಧುಕರ ಶೆಟ್ಟಿ ಯವರ ಅಕಾಲಿಕ ನಿಧನ ದ ಸುದ್ದಿ ಕೇಳಿ ಆಘಾತವಾಯಿತು . ಅವರ ತಂದೆ ದಿವಂಗತ ವಡ್ಡರ್ಸೆ ರಘುರಾಮ ಶೆಟ್ಟರು ನೇರ ನಿಷ್ಠೆಯ ಪತ್ರಕರ್ತರಾಗಿದ್ದರು . ಅದೇ ಗುಣಗಳು ಅವರ ಪುತ್ರನಲ್ಲಿತ್ತು . ಖಡಕ್ ಅಧಿಕಾರಿಯ ಅಗಲಿಕೆ ಕನ್ನಡ ನಾಡಿಗೆ ದೊಡ್ಡ ನಷ್ಟ . ಓಂ ಶಾಂತಿ pic.twitter.com/Ql1nXFYnxc
— Sadananda Gowda (@DVSBJP) December 28, 2018










