ಹಿರಿಯ ನಟ ಲೋಕನಾಥ್ ಅವರ ನಿಧನಕ್ಕೆ ಸಿಎಂ ಸಂತಾಪ…

255
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹಿರಿಯ ನಟ ಲೋಕನಾಥ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ನಿಧನ ದುಃಖ ಉಂಟು ಮಾಡಿದೆ.ಪೋಷಕ ಪಾತ್ರಗಳಿಗೆ ಜೀವ ತುಂಬಿದ ನಟ ಲೋಕನಾಥ್ ಅವರ ಭೂತಯ್ಯನ ಮಗ ಅಯ್ಯು ಚಿತ್ರದ ಪಾತ್ರ ಜನಮನದಲ್ಲಿ ಸದಾ ಹಸಿರಾಗಿ ಉಳಿದಿದೆ. ಚಿತ್ರರಂಗ , ರಂಗಭೂಮಿ ಎರಡರಲ್ಲೂ ಅವರ ಕೊಡುಗೆ ಸ್ಮರಣೀಯ.ಲೋಕನಾಥ್ ಆತ್ಮಕ್ಕೆ ಶಾಂತಿ ಸಿಗಲಿ,ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ.