ಮುಂಬೈ: ಬಾಲಿವುಡ್ ನ ಹಿರಿಯ ನಟ ಖಾದರ್ ಖಾನ್(81) ಅವರು ಕೆನಾಡದ ಟೊರಾಂಟೋದಲ್ಲಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಖಾದರ್ ಖಾನ್ ಅವರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು, ಅವರು 250ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ ಬರೆದಿದ್ದಾರೆ.










