ಬೆಂಗಳೂರು: ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರು ನಾನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳುತ್ತಿಲ್ಲ. ನನಗೆ ಆರೋಗ್ಯ ಸಮಸ್ಯೆಯಿಂದ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಆಗುತ್ತಿಲ್ಲ. ಜನವರಿ 3ರಂದು ಜೆಡಿಎಸ್ ಪಕ್ಷದ ಸಭೆ ಇದೆ. ಸಭೆಯಲ್ಲಿ ದೇವೇಗೌಡರ ಬಳಿ ಮಾತಾಡುತ್ತೇನೆ. ಅವರ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದಿದ್ದಾರೆ.










