ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಒಳಗೆ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಪ್ರವೇಶ ಮಾಡಿದ್ದಾರೆ ಎನ್ನಲಾಗುತ್ತಿದ್ದು, 40 ವರ್ಷದ ಬಿಂದು ಮತ್ತು ಕನಕದುರ್ಗ ಎನ್ನುವ ಇಬ್ಬರು ಮಹಿಳೆಯರು ಇಂದು ಮುಂಜಾನೆ 3 :45ರ ಸುಮಾರಿಗೆ ದೇವಸ್ಥಾನಕ್ಕೆ ತೆರಳಿ ಅಯ್ಯಪ್ಪನ ದರ್ಶನ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.










