ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆಗೆ ಶರಣು…

316
firstsuddi

ಕೊಪ್ಪಳ: ಒಂದೇ ಕುಟುಂಬದ ಆರು  ಮಂದಿ ಆತ್ಮಹತ್ಯೆಗೆ  ಶರಣಾಗಿರುವ ಘಟನೆ ಕೊಪ್ಪಳ ತಾಲೂಕಿನ ಮೆತಗಲ್ ಗ್ರಾಮದಲ್ಲಿ ನಡೆದಿದೆ.ಶೇಖರಯ್ಯ ಬೀಡನಾಳ (42), ಪತ್ನಿ ಜಯಮ್ಮ(39), ಮಕ್ಕಳಾದ ಬಸಮ್ಮ (23), ಗೌರಮ್ಮ (20), ಸಾವಿತ್ರಿ (18), ಪಾರ್ವತಿ (16)  ಮೃತ ದುರ್ದೈವಿಗಳು. ಶೇಖರಯ್ಯ ತನ್ನ ಪತ್ನಿ ಹಾಗೂ ನಾಲ್ವರು ಮಕ್ಕಳಿಗೆ ವಿಷ ಕುಡಿಸಿ ನಂತರ ತಾನು ನೇಣಿಗೆ ಶರಣಾಗಿದ್ದಾನೆ.  ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಪ್ರಕರಣ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ