ರಾಕಿಂಗ್ ಸ್ಟಾರ್ ಯಶ್ ಈ ವರ್ಷ ಹುಟ್ಟುಹಬ್ಬ ಆಚರಣೆ ಬೇಡ ಎಂದಿದ್ದೇಕೆ…?

295
firstsuddi

ಬೆಂಗಳೂರು: ಜನವರಿ 8 ಅಂದರೆ ನಾಳೆ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ.ಯಶ್ ಅವರ ಅಭಿಮಾನಿಗಳು ಅವರ ಜನ್ಮದಿನವನ್ನು ಆಚರಿಸಲು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಯಶ್ ಅವರು ಹುಟ್ಟುಹಬ್ಬವನ್ನು ಆಚರಿಕೊಳ್ಳುವುದಿಲ್ಲ ಎಂದು ​ ಫೇಸ್​ಬುಕ್ ಲೈವ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ರೆಬಲ್ ಸ್ಟಾರ್ ಅಂಬರೀಷ್ ಅವರು ನಮ್ಮ ಜೊತೆಗೆ ಇಲ್ಲ. ಅವರಿಗೆ ಗೌರವ ಸೂಚಿಸುವ ಉದ್ದೇಶದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾರು ಅನ್ಯತಾ ಭಾವಿಸಬೇಡಿ ಎಂದು ಅಭಿಮಾನಿಗಳ ಬಳಿ ಮನವಿ ಮಾಡಿದ್ದಾರೆ. ನಿಮ್ಮನ್ನು ನಾನೇ ಕೆಜಿಎಫ್ ಯಶಸ್ಸಿನ ಹಿನ್ನಲೆ  ಯಶೋ ಯಾತ್ರೆ ಮೂಲಕ ಭೇಟಿಯಾಗುತ್ತೇನೆ ಎಂದಿದ್ದಾರೆ.