ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯ ಡ್ರಾ ದಲ್ಲಿ ಅಂತ್ಯವಾಗಿದ್ದು, ಆಸಿಸ್ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಇದರೊಂದಿಗೆ 71 ವರ್ಷಗಳ ಸುದೀರ್ಘ ಕಾಯುವಿಕೆ ಅಂತ್ಯವಾಗಿದೆ. ಟೀಂ ಇಂಡಿಯಾ ಅಂತಿಮ ಪಂದ್ಯದಲ್ಲಿ ಡ್ರಾ ಆಗುವುದರೊಂದಿಗೆ ಸರಣಿಯನ್ನು 2-1 ಅಂತರದಲ್ಲಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದ್ದಾರೆ.










