ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ. 10ರಷ್ಟು ಮೀಸಲಾತಿ…

237

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂದು ಭರ್ಜರಿ ಉಡುಗೊರೆಯೊಂದನ್ನು ಘೋಷಿಸಿದೆ. ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ  ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶೇ. 10ರಷ್ಟು ಮೀಸಲಾತಿ ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಈ ನಿರ್ಣಯ ಕೈಗೊಳ್ಳಲಾಗಿದೆ.