ನವದೆಹಲಿ: ಸಿಬಿಐ ನಿರ್ದೇಶಕರಾಗಿ ಮುಂದುವರೆಯುವಂತೆ ಅಲೋಕ್ ವರ್ಮಾ ಅವರಿಗೆ ಇಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅಲೋಕ್ ವರ್ಮಾ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ್ದ ಕೇಂದ್ರ ಸರ್ಕಾರದ ಆದೇಶ ತಪ್ಪು ಎಂದು ಹೇಳಿದೆ. ಹಾಗೂ ಅಲೋಕ್ ವರ್ಮಾ ಅವರು ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.










