ಕಲಬುರಗಿ: ಹಾಡಹಗಲೇ ನಡು ರಸ್ತೆಯಲ್ಲೇ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಕೇಂದ್ರ ಬಸ್ ನಿಲ್ದಾಣದ ಎದುರು ನಡೆದಿದೆ. ಮೇಳಕುಂದ ಗ್ರಾಮದ ನಿವಾಸಿ ಮಲ್ಲಿಕಾರ್ಜುನ್ (29) ಮೃತ ದುರ್ದೈವಿ. ಮಲ್ಲಿಕಾರ್ಜುನ್ ಲಾಡ್ಜ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಬೆಳಿಗ್ಗೆ ಕೆಲಸ ಮುಗಿಸಿ ಹಿಂದಿರುತಿದ್ದ ವೇಳೆ ದುಷ್ಕರ್ಮಿಗಳು ಏಕಏಕಿ ದಾಳಿ ನಡೆಸಿ ಮಲ್ಲಿಕಾರ್ಜುನ್ ಅವರನ್ನು ಮಾರಕಾಸ್ತ್ರದಿಂದ ಇರಿದು ಬಳಿಕ ಬೈಕ್ ನಲ್ಲಿ ದುಷ್ಕರ್ಮಿಗಳು ತೆರಳಿದ್ದಾರೆ. ಕೊಲೆ ಮಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










