ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಮುದನೂರ ಕೆ ಗ್ರಾಮದಲ್ಲಿ ನೀರಿಗೆ ದುಷ್ಕರ್ಮಿಗಳು ವಿಷ ಬೆರಸಿರುವ ಶಂಕೆ ವ್ಯಕ್ತವಾಗಿದ್ದು, ವಿಷ ಬೆರೆಸಿದ್ದ ಬಾವಿ ನೀರು ಕುಡಿದು ಅಸ್ವಸ್ಥಗೊಂಡಿದ್ದ ವೃದ್ಧೆ ತೆಗ್ಗಹಳ್ಳಿಯ ಹೊನ್ನಮ್ಮ(65) ಅವರು ನಿನ್ನೆ ಮೃತಪಟ್ಟಿದ್ದರು. ಇದೀಗ ಮತ್ತೆ ನಾಲ್ವರು ಅಸ್ವಸ್ಥ ಗೊಂಡಿದ್ದು, ಶಖಾಪುರ ಗ್ರಾಮದ ಲಕ್ಷ್ಮೀ ಬಾಯಿ, ಕಸ್ತೂರಿ ಬಾಯಿ, ಶಾಂತಮ್ಮ ಹಾಗೂ ಬಸಮ್ಮ ಎಂಬವರನ್ನು ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡವರ ಸಂಖ್ಯೆ 10ಕ್ಕೆ ಏರಿದೆ ಎಂದು ತಿಳಿದು ಬಂದಿದೆ.










