ಬೆಂಗಳೂರು: ನಟ ಯಶ್ ನಿವಾಸ ಹಾಗೂ ಕಚೇರಿ ಮೇಲೆ ಐಟಿ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಯಶ್ ಅವರು ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಐಟಿ ಕಚೇರಿಗೆ ಹಾಜರಾಗಿದ್ದಾರೆ. ಯಶ್ ಜೊತೆ ಅವರ ತಾಯಿ ಪುಷ್ಪ ಅವರು ಕೂಡ ಐಟಿ ಕಚೇರಿಗೆ ಆಗಮಿಸಿದ್ದಾರೆ.










