ನವದೆಹಲಿ: ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಆ ವೇಳೆ ಕರ್ನಾಟಕದ ಉದಾಹರಣೆ ನೀಡುತ್ತಾ, ಕರ್ನಾಟಕದಲ್ಲಿ ಮುಖ್ಯಮಂತ್ರಿಯನ್ನು ಕಾಂಗ್ರೆಸ್ ಕ್ಲರ್ಕ್‌ನಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಲೇವಡಿ ಮಾಡಿದ್ದಾರೆ.










