ಅಂಬಿ ನಿಧನ: ಸರಳ ಹುಟ್ಟುಹಬ್ಬ ಆಚರಣೆಗೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಮನವಿ…

228
firstsuddi

ಬೆಂಗಳೂರು: ಫೆಬ್ರವರಿ 16 ರಂದು ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ  ಹುಟ್ಟುಹಬ್ಬ. ದರ್ಶನ್‌ ಅವರ ಅಭಿಮಾನಿಗಳು ಅವರ ಜನ್ಮದಿನವನ್ನು ಆಚರಿಸಲು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ದರ್ಶನ್ ಅವರು ಸರಳ ಹುಟ್ಟುಹಬ್ಬ ಆಚರಿಸುವ ಕುರಿತು ಅಭಿಮಾನಿಗಳಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.  

firstsuddi

ಪ್ರೀತಿಯ ಅಭಿಮಾನಿಗಳಿಗೆ ನಿಮ್ಮ ದಾಸ ದರ್ಶನ್ ತೂಗುದೀಪ  ಮಾಡುವ ವಿನಂತಿ. ನನ್ನ ಹುಟ್ಟುಹಬ್ಬದ ದಿನ ನೀವೆಲ್ಲ ದೂರ ದೂರದ ಊರುಗಳಿಂದ ಬಂದು ಶುಭಕೋರಿ ನಿಮ್ಮದೇ ಹುಟ್ಟುಹಬ್ಬ ಎನ್ನುವಂತೆ ಸಂಭ್ರಮಿಸುವುದು ನನ್ನ ಯಾವುದೋ ಜನ್ಮದ ಪುಣ್ಯವೆಂದು ಭಾವಿಸುತ್ತೇನೆ. ಆದರೆ ಈ ವರ್ಷ ”ಅಂಬಿ ಅಪ್ಪಾಜಿ”  ನಮ್ಮನ್ನು ಅಗಲಿ ದೂರವಾದ ಕಾರಣ ನನ್ನ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಬೇಕೆಂದು ಕೇಳಿಕೊಳ್ಳುತ್ತೇನೆ.

“ಬ್ಯಾನರ್, ಕೇಕ್ ಹಾಗೂ ಹಾರಗಳನ್ನು” ದಯಮಾಡಿ ಯಾರು ತರಬೇಡಿ. ಅದೇ  ಹಣವನ್ನು ನಿಮ್ಮ ಊರಿನಲ್ಲಿರುವ “ಅನಾಥ ಮಕ್ಕಳ ವಿದ್ಯಾಭ್ಯಾಸಕ್ಕೆ” ಮೀಸಲಾಗಿಡಿ ಹಾಗೂ ಈ  ಸಂಭ್ರಮಾಚರಣೆಯ ಸಂದರ್ಭದಲ್ಲಿ ನಮ್ಮ ಮನೆಯ ಅಕ್ಕ ಪಕ್ಕದ ನಿವಾಸಿಗಳಿಗೆ ತೊಂದರೆ ಕೊಡುವುದು, ಪಟಾಕಿ ಹೊಡೆಯುವುದು, ಕಾಂಪೌಂಡ್ ಹತ್ತುವುದು, ಹೂ ಕುಂಡಗಳನ್ನು ಬೀಳಿಸುವುದು ಹಾಗೂ ಅವರ ಸ್ವತ್ತುಗಳಿಗೆ ಹಾನಿ ಮಾಡುವುದು ಇಂತಹ  ಅನುಚಿತ ವರ್ತನೆ ತೋರಬಾರದು. ನನ್ನ  ಬಗ್ಗೆ ಇಷ್ಟೆಲ್ಲ ಪ್ರೀತಿ ಅಭಿಮಾನ ಇಟ್ಟಿರುವ ನೀವೆಲ್ಲ  ನನ್ನ ಕೋರಿಕೆಯನ್ನು ನಡೆಸಿಕೊಡುವಿರೆಂದು ನಂಬಿರುತ್ತೇನೆ ಹಾಗೂ ಸಂಘದ ಕಾರ್ಯಕರ್ತರಿಗೆ ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಸಹಕರಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ಎಂದು ಪತ್ರದ ಮೂಲಕ  ದರ್ಶನ್ ಅವರು  ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.