ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಗುರುಗ್ರಾಮದಿಂದ ನಮ್ಮ ಎಲ್ಲಾ ಶಾಸಕರಿಗೂ ವಾಪಸ್ ಬರಲು ಸೂಚಿಸಿದ್ದೇನೆ. ನಮ್ಮ ಎಲ್ಲಾ ಶಾಸಕರು ಇಂದೇ ವಾಪಸ್ ಬರುತ್ತಾರೆ. ಈಗ ನಮ್ಮ ಕೆಲಸ ಬರದಿಂದ ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸುವುದು. ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಾವು ಮಾಡುವುದಿಲ್ಲ. ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಆ ಭಯ ಬೇಡ. ಇದನ್ನು ಸ್ಪಷ್ಟಪಡಿಸುತ್ತಿದ್ದೇನೆ, ಪ್ರತಿಪಕ್ಷವಾಗಿ ನಾವು ನಮ್ಮ ಕೆಲಸ ನಿರ್ವಹಿಸುತ್ತೇವೆ ಎಂದಿದ್ದಾರೆ.










