ಡಾ. ಶ್ರೀ ಶಿವಕುಮಾರ ಸ್ವಾಮೀಜಿ ನಿಧನ : ನಾಳೆ ಸರ್ಕಾರಿ ರಜೆ ಘೋಷಣೆ…

247
firstsuddi

ತುಮಕೂರು: ನಡೆದಾಡುವ ದೇವರು, ಶತಾಯುಷಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರು   ಲಿಂಗೈಕ್ಯರಾದ ಹಿನ್ನೆಲೆಯಲ್ಲಿ  ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು,  ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ನಡೆಸಲಾಗುವುದು. ಹಾಗೂ ನಾಳೆ ಶಾಲಾ, ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆಯನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು  ಘೋಷಣೆ ಮಾಡಿದ್ದಾರೆ. ತುಮಕೂರು ಜಿಲ್ಲೆಗೆ ಇಂದು ಮಧ್ಯಾಹ್ನದಿಂದಲೇ ರಜೆ ಘೋಷಣೆ ಮಾಡಲಾಗಿದೆ.