ಸಿದ್ಧಗಂಗಾ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ…

213

ತುಮಕೂರು: ಸಿದ್ಧಗಂಗಾ ಶ್ರೀಗಳ ಲಿಂಗಶರೀರ ಗದ್ದುಗೆ ತಲುಪಿದ್ದು, ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಶ್ರೀ ಗಳ ಲಿಂಗಶರೀರದ ಮೇಲೆ ರಾಷ್ಟ್ರಧ್ವಜವನ್ನು ಹೊದಿಸಿ, ರಾಷ್ಟ್ರಗೀತೆಯನ್ನು ಹಾಡುವ ಮೂಲಕ ಗೌರವ ಸಲ್ಲಿಸಲಾಯಿತು.ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ,ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ಮಾಜಿ ಪ್ರಧಾನಿ ಹೆಚ್ ​ಡಿ ದೇವೇಗೌಡ, ಬಿಎಸ್​ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.