ವಿದ್ಯಾರ್ಥಿಗಳು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಲು ಕೌಶಲ್ಯಾಧಾರಿತ ತರಬೇತಿಗಳು ಅತ್ಯಗತ್ಯ: ಡಾ|| ಡಿ.ಎಲ್.ವಿಜಯ್‍ಕುಮಾರ್…

184
firstsuddi

ಚಿಕ್ಕಮಗಳೂರು: ಯುವಜನತೆ ತಮ್ಮ ಬದುಕನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೇ ಕೌಶಲ್ಯಾಧಾರಿತ ತರಬೇತಿಗಳನ್ನು ಪಡೆದುಕೊಳ್ಳಬೇಕು ಎಂದು ಮಲೆನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ|| ಡಿ.ಎಲ್.ವಿಜಯ್‍ಕುಮಾರ್ ಸಲಹೆ ಮಾಡಿದರು.
ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಎಂಇಎಸ್ ವಾಣಿಜ್ಯಶಾಸ್ತ್ರ ವೇದಿಕೆ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಸೋಮವಾರ ಏರ್ಪಡಿಸಿದ್ದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿಗಾಗಿ ಮಾರ್ಗದರ್ಶನ ಹಾಗೂ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಲು ಕೌಶಲ್ಯಾಧಾರಿತ ತರಬೇತಿಗಳು ಅತ್ಯಗತ್ಯ ಎಂದ ಅವರು ಶಿಕ್ಷಣ ಸಂಸ್ಥೆಗಳು ಮತ್ತು ಸಂಘ ಸಂಸ್ಥೆಗಳು ಅಂತಹ ತರಬೇತಿ ಕಾರ್ಯಾಗಾರಗಳನ್ನು ನಡೆಸುವ ಮೂಲಕ ಯುವಜನತೆಗೆ ಮಾರ್ಗದರ್ಶನ ಮಾಡಬೇಕು ಎಂದು ಹೇಳಿದರು.
ವೇದಿಕೆಯ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಮಾತನಾಡಿ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಇಂತಹ ಕಾರ್ಯಾಗಾರಗಳು ಸಹಕಾರಿ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಎನ್.ಕೇಶವಮೂರ್ತಿ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿಗಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಎಂಇಎಸ್ ಛೇಂಬರ್ ಆಫ್ ಕಾಮರ್ಸ್‍ನ ಕಾರ್ಯದರ್ಶಿ ಕೆ.ಎನ್.ಮಂಜುನಾಥ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು, ಉಪಾಧ್ಯಕ್ಷ ಡಾ|| ಹೆಚ್.ವಿಷ್ಣುವರ್ಧನ್, ಸಂಸ್ಥೆಯ ಆಡಳಿತಾಧಿಕಾರಿ ಎಸ್.ಶಾಂತಕುಮಾರಿ, ಆರ್.ಕೆ.ಬಾಲಚಂದ್ರ, ವಿಜಯಲಕ್ಷ್ಮೀ ಉಪಸ್ಥಿತರಿದ್ದರು.