ಶಾಸಕ ಗಣೇಶ್ ಅವರ ಪತ್ತೆಗಾಗಿ ಶೋಧ ನಡೆಸುತ್ತಿರುವ ಪೊಲೀಸರು…

171

ಬೆಂಗಳೂರು:  ಶಾಸಕ ಆನಂದ ಸಿಂಗ್ ಅವರ ಮೇಲೆ ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಮೇಲೆ ಎಫ್‍ಐಆರ್ ದಾಖಲಾಗುತ್ತಿದ್ದಂತೆ ಗಣೇಶ್ ಅವರು ಕಣ್ಮರೆಯಾಗಿದ್ದಾರೆ. ಅಪೊಲೋ ಆಸ್ಪತ್ರೆಯಲ್ಲಿರುವ ಆನಂದ್ ಸಿಂಗ್ ಅವರು ಗಣೇಶ್ ಅವರು ಹಲ್ಲೆ ಮಾಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಿಡದಿ ಪೋಲೀಸರು ಗಣೇಶ್ ಅವರ ಪತ್ತೆಗಾಗಿ ಪೋಲೀಸ್ ರು ಶೋಧ ನಡೆಸುತ್ತಿದ್ದು, ಗಣೇಶ್ ಅವರ ಪತ್ತೆಗಾಗಿ ಮೂರೂ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿದು ಬಂದಿದೆ.