ಚಿಕ್ಕಮಗಳೂರು -ಪ್ರಾಥಮಿಕ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲೀಷ್ ಕಲಿಕೆಗೂ ಅವಕಾಶ ಕಲ್ಪಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಾಹಿತಿಗಳು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ನಗರದ ಶ್ರೀ ಗುರು ಸಿದ್ದರಾಮೇಶ್ವರ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ನಡೆದ ಎಂಜೆಎಸ್ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾವು ಇಂದು ಆಧುನಿಕ ಮತ್ತು ಸ್ಪರ್ಧಾತ್ಮಕ ಯುಗದಲ್ಲಿದ್ದೇವೆ , ಮಕ್ಕಳಿಗೆ ಇಂಗ್ಲೀಷ್ ಕಲಿಸದಿದ್ದರೆ ಅವರು ಊರಿನಿಂದ ಮುಂದೆ ಹೋಗುವುದಕ್ಕೆ ಸಾಧ್ಯವಾಗದಂತಹ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ, ಇಂಗ್ಲೀಷ್ ಮತ್ತು ಹಿಂದಿ ಕಲಿಯದಿದ್ದಲ್ಲಿ ಉದ್ಯೋಗ ಸೇರಿದಂತೆ ಯಾವುದೇ ಕ್ಷೇತ್ರದಲ್ಲೂ ಮುಂದುವರೆಯಲು ಆಗದಂತಹ ಸ್ಥಿತಿ ಇಂದಿದೆ ಎಂದರು.ಇಂದು ಇಂಗ್ಲೀಷ್ ಜ್ಞಾನ ಇಲ್ಲದಿದ್ದಲ್ಲಿ ಅವಮಾನಕ್ಕೊಳಗಾಗಬೇಕಾಗುತ್ತದೆ ವಕೀಲನಾದ ಸಂದರ್ಭದಲ್ಲಿ ಸ್ವತÀಃ ನಾನೇ ಅದನ್ನು ಅನುಭವಿಸಿದ್ದೇನೆ, ರಾಜ್ಯ ಸರ್ಕಾರ ಕನ್ನಡ ಶಾಲೆಗಳನ್ನು ಮುಚ್ಚಲು ಮುಂದಾಗಿಲ್ಲ, ಕನ್ನಡದ ಜೊತೆಗೆ ಆಂಗ್ಲ ಭಾಷೆಯನ್ನೂ ಒಂದು ವಿಷಯವನ್ನಾಗಿ ಕಲಿಸಲು ನಿರ್ಧರಿಸಿದೆ ಎಂದ ಅವರು ಇದನ್ನು ಸಾಹಿತಿಗಳು ಅರ್ಥ ಮಾಡಿಕೊಳ್ಳಬೇಕು ಇಂದಿನ ಮಕ್ಕಳ ಭವಿಷ್ಯವನ್ನು ರೂಪಿಸುವುದಕ್ಕಾಗಿ ಸರ್ಕಾರದ ನಿರ್ಧಾರವನ್ನು ಬೆಂಬಲಿಸಬೇಕು ಎಂದು ಹೇಳಿದರು. ಶ್ರೀ ಗುರುಸಿದ್ದರಾಮೇಶ್ವರ ವಿದ್ಯಾಸಂಸ್ಥೆ ನಿರ್ಮಿಸಲಿರುವ ವಿದ್ಯಾರ್ಥಿ ವಸತಿ ನಿಲಯ ಮತ್ತು ನೊಳಂಬ ಸಮುದಾಯ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಅನುದಾನ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು.
ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಪುಷ್ಪಗಿರಿ ಮಹಾಸಂಸ್ಥಾನದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಗುರು ಸಿದ್ದರಾಮೇಶ್ವರ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ವಸತಿ ನಿಲಯ ಮತ್ತು ನೊಳಂಬ ಸಮುದಾಯ ಭವನ ನಿರ್ಮಾಣಕ್ಕೆ ತಮ್ಮ ಅನುದಾನದ ಜೊತೆಗೆ ರಾಜ್ಯ ಸರ್ಕಾರದಿಂದಲೂ ಅನುದಾನ ಒದಗಿಸಿ ಕೊಡುವಂತೆ ಎಸ್.ಎಲ್.ಭೋಜೇಗೌಡ ಅವರನ್ನು ಒತ್ತಾಯಿಸಿದರು
ಜಿ.ಪಂ. ಸದಸ್ಯರಾದ ಸೋಮಶೇಖರ್, ವಿಜಯ್‍ಕುಮಾರ್, ಸಂಸ್ಥೆಯ ಕಾರ್ಯದರ್ಶಿ ಎಸ್.ಎಸ್.ಚಂದ್ರಶೇಖರ್ ಮಾತನಾಡಿದರು, ಶಾಲೆಯ ಕಾರ್ಯಾಧ್ಯಕ್ಷ ಬಿ.ಆರ್.ಜಗಧೀಶ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಸಹಕಾರ್ಯದರ್ಶಿ ಎಸ್.ಆರ್.ಕುಮಾರ್, ಖಜಾಂಚಿ ಯು.ಬಿ.ಶಾಂತಕುಮಾರ್, ಸದಸ್ಯರಾದ ಸಿದ್ದರಾಮೇಗೌಡ, ರಮೇಶ್, ಪ್ರದೀಪ್, ಎಂ.ಸತೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಸಿ.ಶಿವಾನಂದಸ್ವಾಮಿ, ಚಿಕ್ಕದೇವನೂರು ರವಿ ಉಪಸ್ಥಿತರಿದ್ದರು.










