ಪ್ರತಿಯೊಬ್ಬ ಪ್ರಜೆಗೂ ನೀಡಿರುವ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಅರಿತು ನಡೆದರೆ ಉತ್ತಮ ದೇಶ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ:ಎಸ್.ಎಲ್. ಧರ್ಮೇಗೌಡ…

301

ಚಿಕ್ಕಮಗಳೂರು: ಗಣರಾಜ್ಯೋತ್ಸವ ದಿನದಲ್ಲಿ ನಾವು ಎಷ್ಟರ ಮಟ್ಟಿಗೆ ಸಂವಿಧಾನ ಬದ್ಧವಾಗಿ ನಡೆದುಕೊಳ್ಳುತ್ತಿದ್ದೇವೆ ಎಂಬುವುದರ ಬಗ್ಗೆ ಆತ್ಮವಲೋಕನೆ ಮಾಡಿಕೊಳ್ಳಬೇಕೆಂದು ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ತಿಳಿಸಿದರು.
ಅವರು ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆರವಣದಲ್ಲಿ ಇಂದು ಬೆಳಿಗ್ಗೆ ಗಣರಾಜ್ಯೋತ್ಸವಾಚರಣೆ ಪ್ರಯುಕ್ತ ನಂತರ ಮಹಾತ್ಮ ಗಾಂಧೀಜಿ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಂತರ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ಸಂವಿಧಾನವನ್ನು ಎಲ್ಲಾ ಅರ್ಥದಲ್ಲೂ ಗೌರವಿಸಿ ಸಂವಿಧಾನ ಪ್ರತಿಯೊಬ್ಬರ ಪ್ರಜೆಗೂ ನೀಡಿರುವ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಅರಿತು ನಡೆದರೆ ಉತ್ತಮ ದೇಶ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಮಹಿಳೆಯರು ಇಂದು ಎಲ್ಲಾ ರಂಗದಲ್ಲೂ ಮುಂದೆ ಬಂದಿದ್ದಾರೆ. ಅವರ ಸಾಧನೆ ಅನನ್ಯವಾಗಿದೆ. ಸಂವಿಧಾನಬದ್ಧವಾಗಿ ಅವರಿಗೆ ಅರ್ಹವಾದ ಎಲ್ಲಾ ಹಕ್ಕುಗಳನ್ನು ಅವರಿಗೆ ದೊರಕುವಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಎಷ್ಟರ ಮಟ್ಟಿಗೆ ಸಮಾಜ ನಿರ್ವಹಿಸುತ್ತದೆ ಎಂದು ಆತ್ಮಾವಲೋಕನೆ ಮಾಡಿಕೊಳ್ಳಬೇಕಾಗುತ್ತದೆ ಎಂದ ಅವರು ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.
ಇದೇ ಸಂದರ್ಭದಲ್ಲಿ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾದ ನಾಗೇಶ್ ಎಸ್. ಡೋಂಗರೆ ಮತ್ತಿತರರು ಉಪಸ್ಥಿತರಿದ್ದರು.