ಬೆಂಗಳೂರು: ಮೆಟ್ರೋ ಎಸ್ಕಲೇಟರ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ನಿನ್ನೆ ರಾತ್ರಿ ಶ್ರೀರಾಂಪುರ ಮೆಟ್ರೋ ಸ್ಟೇಷನ್ನಲ್ಲಿ ಅಜ್ಜಿ ಜೊತೆ ತೆರಳುತ್ತಿದ್ದ ಸಂದರ್ಭದಲ್ಲಿ ಹಾಸಿನಿ ಎಂಬ ಮಗು ಎಸ್ಕಲೇಟರ್ ನಿಂದ ಕೆಳಗೆ ಬಿದ್ದು, ಹಾಸಿನಿಯ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಕೂಡಲೇ ಮಗುವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.










