ಬೆಂಗಳೂರು: ಸೆಕ್ಯೂರಿಟಿ ಗಾರ್ಡ್ ಓರ್ವ ವಕೀಲೆಯೋರ್ವರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಂಗಳೂರಿನ ಅಶೋಕನಗರದಲ್ಲಿ ಜನವರಿ 25ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜನವರಿ 25ರಂದು ವಕೀಲೆ ತಡರಾತ್ರಿ ವರೆಗೂ ತನ್ನ ಕಛೇರಿಯಿಂದ ಕೆಲಸ ಮುಗಿಸಿ ಕಚೇರಿಯಿಂದ ಹೊರಟು ಪಾರ್ಕಿಂಗ್ ಜಾಗಕ್ಕೆ ಬರುತ್ತಿದ್ದಂತೆ ವಕೀಲೆಯನ್ನು ಕೆಳಗೆ ಬೀಳಿಸಿ ಸೆಕ್ಯೂರಿಟಿ ಗಾರ್ಡ್ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವಕೀಲೆ ಕೂಗುತ್ತಿದ್ದಂತೆ ಸೆಕ್ಯೂರಿಟಿ ಗಾರ್ಡ್ ಅಲ್ಲಿಂದ ಪರಾರಿಯಾಗಿದ್ದು, ವಕೀಲೆ ತಕ್ಷಣ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅಶೋಕ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.










