ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂಬ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಶಾಸಕರನ್ನು ನಾವೇ ಕಂಟ್ರೋಲ್ ಮಾಡಬೇಕು. ಇನ್ನೇನು ಅವರು ಮಾಡ್ತಾರಾ. ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ. ನಾನು ಕುಮಾರಸ್ವಾಮಿ ಅವರ ಜೊತೆ ಮಾತನಾಡುತ್ತೇನೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.










