ಮಾಜಿ ಸಚಿವ  ಜಾರ್ಜ್ ಫರ್ನಾಂಡೀಸ್ ಅವರ ನಿಧನಕ್ಕೆ ಬಿಎಸ್ ವೈ ಸಂತಾಪ…

215
firstsuddi

ಬೆಂಗಳೂರು : ಮಾಜಿ ಸಚಿವ  ಜಾರ್ಜ್ ಫರ್ನಾಂಡೀಸ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದು,  ಕೇಂದ್ರ ಸಚಿವರಾಗಿದ್ದ ಜಾರ್ಜ್ ಫರ್ನಾಂಡೀಸ್ ಅವರ ನಿಧನ ತೀವ್ರ ದುಃಖವನ್ನುಂಟು ಮಾಡಿದೆ. ಕಾರ್ಮಿಕರು, ಶೋಷಿತರ ಧ್ವನಿಯಾಗಿದ್ದ ಇವರು, ಸರಳತೆಯಿಂದಲೇ ಜನಮನ ಗೆದ್ದಿದ್ದರು. ದೇಶ ಒಬ್ಬ ಆದರ್ಶ ರಾಜಕಾರಣಿಯನ್ನು ಕಳೆದುಕೊಂಡಿದೆ. ಇವರ ಆತ್ಮಕ್ಕೆ ಶಾಂತಿ ಸಿಗಲಿ. ಇವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಟ್ವಿಟ್ ಮಾಡಿದ್ದಾರೆ.