ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೊನೆಯ ಮತ್ತು ಮಧ್ಯಂತರ ಬಜೆಟ್ ಅನ್ನು ವಿತ್ತ ಸಚಿವ ಪಿಯೂಷ್ ಗೋಯಲ್ ಇಂದು ಮಂಡಿಸಲಿದ್ದು, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆಗಾಗಿ ನ್ಯೂಯಾರ್ಕ್ ಗೆ ತೆರಳಿದ್ದರಿಂದ ಹಣಕಾಸು ಇಲಾಖೆಯನ್ನು ಹೆಚ್ಚುವರಿಯಾಗಿ ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿದೆ. ಕೊನೆಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ.










