ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಿರಾಶಾದಾಯಕವಾಗಿದೆ:ಕೆ.ವಿ.ಶಿವಕುಮಾರ್…

711
firstsuddi

ಚಿಕ್ಕಮಗಳೂರು : ಕೇಂದ್ರ ಸರ್ಕಾರದ ಹಣಕಾಸು ಸಚಿವರು ಮಂಡಿಸಿರುವ ಮಧ್ಯಂತರ ಬಜೆಟ್ ನಿರಾಶಾದಾಯಕವಾಗಿದೆ ಎಂದು ಯುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ಹೇಳಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈಗಲಾದರೂ ಬಡವರು, ರೈತರು ಮತ್ತು ಬೆಳೆಗಾರರಿಗೆ ಬಂಪರ್ ಕೊಡುಗೆ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು ಆದರೆ ಹಣಕಾಸು ಸಚಿವರು ಎಲ್ಲರ ಮೂಗಿಗೆ ತುಪ್ಪ ಸವರುವ ಕೆಲಸ ಮಾತ್ರ ಮಾಡಿದ್ದಾರೆ ಎಂದು ಹೇಳಿಕೆಯಲ್ಲಿ ಟೀಕಿಸಿದ್ದಾರೆ.
ಕಳೆದ ನಾಲ್ಕುವರೆ ವರ್ಷಗಳಲ್ಲಿ ನೀಡದ ಕೊಡುಗೆ ಮತ್ತು ಯೋಜನೆಗಳನ್ನು ಕೊನೆಯ ಬಜೆಟ್‍ನಲ್ಲಿ ಪ್ರಸ್ತಾಪಿಸಿರುವ ಕೇಂದ್ರ ಸರ್ಕಾರ ಬಜೆಟ್ ಮೂಲಕ ಚುನಾವಣಾ ಗಿಮಿಕ್ ಮಾಡುತ್ತಿದೆ ಎಂದು ತಿಳಿಸಿದ್ದಾರೆ.