ಬೆಂಗಳೂರು:ಉಪೇಂದ್ರ ಹಾಗೂ ರಚಿತಾ ರಾಮ್ ಅಭಿನಯದ ಬಹು ನಿರೀಕ್ಷಿತ “ಐ ಲವ್ ಯು” ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ ಫೆಬ್ರವರಿ 3 ರಂದು ದಾವಣಗೆರೆಯಲ್ಲಿ ಅದ್ದೂರಿ ಕಾರ್ಯಕ್ರಮದಲ್ಲಿ ಬಿಡುಗಡೆಯಾಗಲಿದೆ. ಈ ಕಾರ್ಯಕ್ರಮದಲ್ಲಿ ಚಿತರಂಗದ ನಟ, ನಟಿಯರಿಂದ ನೃತ್ಯ ಕಾರ್ಯಕ್ರಮಗಳು ನಡೆಯಲಿದ್ದು, ಸಂಗೀತ ನಿರ್ದೇಶಕ ಗುರು ಕಿರಣ್ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಮೋಹನ್ ತಂಡದಿಂದ ನೃತ್ಯ ಕಾರ್ಯಕ್ರಮ ನಡೆಯಲಿದ್ದು, ಮಜಾಭಾರತ ತಂಡದಿಂದ ಹಾಸ್ಯ ಕಾರ್ಯಕ್ರಮಗಳು ನಡೆಯಲಿವೆ ಎಂದು ಟ್ವಿಟ್ ಮೂಲಕ ಉಪೇಂದ್ರ ಅವರು ತಿಳಿಸಿದ್ದಾರೆ.











