ಗದಗ: ಕೌಟುಂಬಿಕ ಕಲಹ ಹಿನ್ನಲೆ ಪತಿಯೇ ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಿ (30) ಮೃತ ದುರ್ದೈವಿ . ಲಕ್ಷ್ಮೀ ವಾಯು ವಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಪತಿ ಲೋಕೇಶ್ ಎಂಬಾತ ಪತ್ನಿಗೆ ದೊಣ್ಣೆ ಯಿಂದ ಹೊಡೆದು ಹತ್ಯೆಗೈದು ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ರೋಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.










